ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ನಾಲ್ವರು MBBS ವಿದ್ಯಾರ್ಥಿಗಳು ಮೃತ್ಯು
ಅಮ್ರೋಹಾ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಎಂಬಿಬಿಎಸ್ ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಅರ್ನವ್ ಚಕ್ರವರ್ತಿ, ಆಯುಷ್ ಶರ್ಮಾ, ಶ್ರೇಷ್ಠ ಪಾಂಚೋಲಿ ಮತ್ತು ಸಪ್ತಋಷಿ ಎಂದು ಗುರುತಿಸಲಾಗಿದೆ. ಅವರೆಲ್ಲರೂ ವೆಂಕಟೇಶ್ವರ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ.
ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಅತ್ರಾಸಿ ಗ್ರಾಮದ ಬಳಿಯ ಫ್ಲೈಓವರ್‌ನಲ್ಲಿರುವ ರೆಸ್ಟೋರೆಂಟ್‌ನ ಮುಂದೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಡಿಕ್ಕಿಯಿಂದ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು ದೆಹಲಿ ಮತ್ತು ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದರು.





