ಮಂಗಳೂರು: ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಯುವಕ ನಾಪತ್ತೆ
ಮಂಗಳೂರು: ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಒರಿಸ್ಸಾ ಮೂಲದ ಕಾರ್ಮಿಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ಸುರೇಶ್ ಮಾಝಿ (27) ಗುರುವಾರ ನಾಪತ್ತೆಯಾಗಿದ್ದಾರೆ.
ಡಿಸೆಂಬರ್ 1 ರಂದು ನಿಲ್ಲಿಸಲಾಗಿದ್ದ ಬೋಟ್ ನಲ್ಲಿ 29 ಮಂದಿ ಕಾರ್ಮಿಕರಿದ್ದರು ಎನ್ನಲಾಗಿದೆ. ಬೋಟ್ ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಪ್ರಶಾಂತ್ ಡಿ.2ರಂದು ರಾತ್ರಿ 9ರ ವೇಳೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಕಾರ್ಮಿಕರು ಮಾತ್ರ ಬೋಟ್ ನಲ್ಲಿ ಉಳಿದುಕೊಂಡಿದ್ದರು. ಡಿ.3ರಂದು ತಡರಾತ್ರಿ 1:30ಕ್ಕೆ ಕಾರ್ಮಿಕರು ಕರೆ ಮಾಡಿ ಸುರೇಶ್ ಮಾಝಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ನೀಡಿದರು. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ. ಈ ಬಗ್ಗೆ ಪ್ರಶಾಂತ್ ಬರ್ಕೆ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.





