March 20, 2026

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನ‌ರ್ ತೆರವು ವಿಚಾರ: ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ

0
image_editor_output_image86127261-1765011323267.jpg

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ನೆತ್ತರು ಹರಿದಿದೆ. ದತ್ತ ಜಯಂತಿ ಬ್ಯಾನ‌ರ್ ತೆರವು ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದು ಒರ್ವ ಬಲಿಯಾಗಿದ್ದಾನೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ತಡ ರಾತ್ರಿ ಈ ಘಟನೆ ನಡೆದಿದೆ. ಗಣೇಶ್ ಗೌಡ(38) ಕೊಲೆ ವ್ಯಕ್ತಿಯಾಗಿದ್ದು ಈತ ಕಾಂಗ್ರೆಸ್ ಕಾರ್ಯಕರ್ತ, ಸಖರಾಯಪಟ್ಟಣ ಗ್ರಾಪಂ ಸದಸ್ಯ ಎಂದು ತಿಳಿದು ಬಂದಿದೆ.

ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಶುಕ್ರವಾರ ತಡ ರಾತ್ರಿ ಸಖರಾಯಪಟ್ಟಣ ಬಾರ್ ಬಳಿ ಎರಡು ಗುಂಪುಗಳ ಮಧ್ಯೆ ನೀದಿ ಕಾಳಗ ನಡೆದಿತ್ತು ಎನ್ನಲಾಗಿದೆ. ಬಾರ್ ಬಳಿ ಆರಂಭವಾದ ಗಲಾಟೆ ಅರ್ಧ ಗಂಟೆ ಬಳಿಕ ಮಠದ ಬಳಿ ಆರಂಭವಾಗಿದೆ.

ಈ ಸಂದರ್ಭ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮಚ್ಚಿನಿಂದ ಗಣೇಶ್‌ ಮೇಲೆ ಹಲ್ಲೆ ನಡೆಸಲಾಗಿದ್ದು ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಬಿಜೆಪಿ, ಬಜರಂಗದಳದ ಐವರು ಕಾರ್ಯಕರ್ತರು ಸೇರಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!