March 20, 2026

ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳತನದ ಆರೋಪಿಯ ಬಂಧನ

0
image_editor_output_image53491415-1765011586715.jpg

ಮಂಗಳೂರು: ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಗುರುವಾರ ಬಂಧಿಸಿರುವ ಕದ್ರಿ ಪೊಲೀಸರು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

ಕೇರಳದ ತಿರುವನಂತಪುರಂನ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ (32)ಬಂಧಿತ ಆರೋಪಿಯಾಗಿದ್ದಾನೆ.

ನ.21ರಂದು ನಗರದ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧೆಯೊಬ್ಬರು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಡಿ. 04 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಸಂಖ್ಯೆ KA19HC6946 ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!