March 20, 2026

ಪುತ್ತೂರು: ಇಲಿಪಾಷಾಣ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1993516510-1765012097897.jpg

ಪುತ್ತೂರು: ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಡಿಸೆಂಬರ್ 5 ರಂದು ನಡೆದಿದೆ.

ಮೃತರನ್ನು ಕಡಬದ ಗುತ್ತಿಗಾರು ನಿವಾಸಿ ಪೂಜಾ ಎಂದು ಗುರುತಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಗೊಂಡ ವಿಧ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!