ಕಾರವಾರ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಿಂದ ಸಿಬ್ಬಂದಿ ಮೇಲೆ ಹಲ್ಲೆ
ಕಾರವಾರ: ಇಲ್ಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಗಳಿಬ್ಬರು ಕಾರಾಗೃಹದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಶನಿವಾರ(ಡಿ.6) ನಡೆದಿದೆ.
ಮಂಗಳೂರು ಮೂಲದ ರೌಡಿ ಶೀಟರ್ಗಳಾದ ಮೊಹಮ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ್ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳು.
ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಇವರನ್ನು ಮಂಗಳೂರು ಕಾರಾಗೃಹದಲ್ಲಿ ಖೈದಿಗಳ ಸಂಖ್ಯೆ ಹೆಚ್ಚಾದ ಕಾರಣ ಕಾರವಾರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.
ಮಾದಕ ವಸ್ತು ಒದಗಿಸುವ ವಿಚಾರದಲ್ಲಿ ಖೈದಿಗಳು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ನಂತರ ಜೈಲರ್ ಕಲ್ಲಪ್ಪ ಗಸ್ತಿ ಮತ್ತು ಇತರ ಮೂವರು ಸಿಬ್ಬಂದಿ ಮೇಲೆ ಹಲ್ಲೆಗೈದಿದ್ದಾರೆ ಎಂದು ಕಾರಾಗೃಹ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.





