ಗೋವಾ: ಬಾಗಾ ಬೀಚ್ ಬಳಿ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ಅವಘಡ: 23 ಮಂದಿ ಸಜೀವ ದಹನ
ಗೋವಾ: ಗೋವಾದ ರೆಸ್ಟೋರೆಂಟ್-ಕ್ಲಬ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪ್ರವಾಸಿಗರು ಹಾಗೂ ರೆಸ್ಟೋರೆಂಟ್ ಸಿಬ್ಬಂದಿಗಳು ಸೇರಿ ಮೂವರು ಮಹಿಳೆಯರು ಮತ್ತು 20 ಪುರುಷರು ಸಜೀವ ದಹನವಾಗಿದ್ದಾರೆ.
ಗೋವಾದ ಅರ್ಪೋರಾದಲ್ಲಿರುವ ರೆಸ್ಟೋರೆಂಟ್ ಕಮ್ ಕ್ಲಬ್ ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ.
ಉತ್ತರ ಗೋವಾದ ಅರ್ಪೋರಾ ಪ್ರದೇಶದಲ್ಲಿದ್ದ ಕ್ಲಬ್‍ನಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತನಿಖೆ ಕೈಗೊಳ್ಳುವಂತೆ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಆದೇಶಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಪೊಲೀಸರು ಎಲ್ಲ ಮೃತದೇಹಗಳನ್ನು ಪತ್ತೆ ಮಾಡಿದ್ದು, ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಗೋವಾದ ಎಲ್ಲ ಸಂಸ್ಥೆಗಳಲ್ಲಿ ಸುರಕ್ಷತಾ ಪರಿಶೋಧನೆ ನಡೆಸುವ ತುರ್ತ ಅಗತ್ಯತೆಯನ್ನು ಅಧಿಕಾರಿಗಳು ಪ್ರತಿಪಾದಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.





