March 22, 2026

ಕೇರಳ ರಾಜ್ಯದಲ್ಲಿ ಡಿ.30ರಿಂದ ನೈಟ್ ಕರ್ಫ್ಯೂ ಜಾರಿ:
ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಸರಕಾರ

0
bng27-night-curfew-3-1-1028877-1631234664.jpg

ಕೇರಳ: ಡಿಸೆಂಬರ್ 30 ರಿಂದ ಜನವರಿ 2ರವರಗೆ ಕೇರಳದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂಯನ್ನು ಜಾರಿಗೊಳಿಸಲಾಗಿದೆ.

ಮುಖ್ಯಮಂತ್ರಿ ಪಿಣರಾಯ್ ವಿಜಯನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ನೈಟ್ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಇನ್ನು ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ಬಳಿಕ ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದೆಂದು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಬಾರ್, ಕ್ಲಬ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಶೇಕಡಾ 50 ರಷ್ಟು ಆಸನ ಭರ್ತಿಗಷ್ಟೇ ಅವಕಾಶ ನೀಡಲಾಗಿದೆ.

ಹೊಸ ವರ್ಷಾಚರಣೆ ವೇಳೆ ಬೀಚ್, ಮಾಲ್, ಸಾರ್ವಜನಿಕ ಪಾರ್ಕ್ ಗಳಲ್ಲಿ ಹೆಚ್ಚು ಜನ ಸೇರದಂತೆ ಪೊಲೀಸ್ ಅಧಿಕಾರಿಗಳ ಬೆಂಬಲದೊಂದಿಗೆ ಜಿಲ್ಲಾಧಿಕಾರಿಗಳು ವಲಯದ ಮ್ಯಾಜಿಸ್ಟ್ರೇಟರ್ ಗಳನ್ನು ನಿಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!