May 3, 2026

ಪ್ರೀತಿ ಹೆಸರಲ್ಲಿ ವಂಚಿಸಿ ಬ್ಲಾಕ್‌ಮೇಲ್: ಕಿರುಕುಳ ತಾಳಲಾರದೆ ಯುವತಿ ಆತ್ಮಹತ್ಯೆ

0
image_editor_output_image835221646-1765180364115.jpg

ರಾಮನಗರ: ಪ್ರೀತಿಸಿದ ಯುವಕ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವತಿಯನ್ನು ವರ್ಷಿಣಿ (22) ಎಂದು ಗುರುತಿಸಲಾಗಿದೆ. ಯುವತಿ ಡೆತ್ ನೋಟ್ ಬರೆದಿಟ್ಟು, ಬಾನುವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಆತ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!