February 1, 2026

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ಯುವಕ ಮುಹಮ್ಮದ್ ಹಾರಿಸ್ ಮೃತ್ಯು

0
image_editor_output_image740242166-1765351199784.jpg

ಬೆಂಗಳೂರು: ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪದ ಅಲ್ಲಿಪಾದೆ ಎಂಬಲ್ಲಿನ ಯುವಕ ಮುಹಮ್ಮದ್ ಹಾರಿಸ್ (34) ಮೃತಪಟ್ಟ ಯುವಕ.

ಮುಹಮ್ಮದ್ ಹಾರಿಸ್ ಬೆಂಗಳೂರಿನ ಏಸಿ ಕಂಪನಿಯೊಂದರಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸದ ನಿಮಿತ್ತ ಇಂದು ತನ್ನ ಸಹೋದ್ಯೋಗಿಯೋರ್ವನೊಡನೆ ಬೈಕಿನಲ್ಲಿ ತೆರಳುತ್ತಿದ್ದಾಗ ಗೂಡ್ಸ್ ವಾಹನವು ಹಿಂಬದಿಯಿಂದ ಢಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹಾರಿಸ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿದ್ದ ಸಹೋದ್ಯೋಗಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!