February 1, 2026

ಉಡುಪಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಕ ಸಾವು

0
image_editor_output_image-1030972379-1765353016315.jpg

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಸಾವನಪ್ಪಿದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.

ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಸ್ಥಳೀಯರ ಸಹಕಾರದಿಂದ ಆತನ ಸ್ನೇಹಿತರು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆಂದು ತಿಳಿದು ಬಂದಿದೆ. ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!