ಕೆಎಸ್‌ಆರ್‌ಟಿಸಿ ಬಸ್‍ಗೆ ಕಾರು ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ.ಚಿಕ್ಕಬಳ್ಳಾಪುರದ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ರಾಣಿ ಕ್ರಾಸ್ ಬಳಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್‍ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಲ್ಲದೇ ಬಸ್‍ನ ಮುಂಭಾಗವೂ ಸಂಪೂರ್ಣ ಹಾನಿಗೊಳಗಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





