March 22, 2026

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್

0
bng27-night-curfew-3-1-1028877-1631234664.jpg

ಬೆಂಗಳೂರು: ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ಮಂಗಳವಾರದಿಂದ ಜಾರಿಯಾಗಲಿದ್ದು, ಮುಂದಿನ 10 ದಿನಗಳ ಕಾಲ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧಗಳು ಇರಲಿದೆ.

ಇದರ ಜೊತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮ ಕೂಡ ಅನ್ವಯವಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಳೆದ ಭಾನುವಾರ ನಡೆದ ಸಭೆ ಬಳಿಕ ರಾತ್ರಿ ಕರ್ಪ್ಯೂ ಮಾರ್ಗಸೂಚಿ ಪ್ರಕಟಿಸಲಾಗಿತ್ತು.

ಹೊಸ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಡಿ.28ರಿಂದ ರಾತ್ರಿಯಿಂದ ಬರುವ ಜ.7ರ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅನಗತ್ಯ ಸುತ್ತಾಟ, ಜನ ಸೇರುವಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳು, ಬಾರ್, ಪಬ್, ರೆಸ್ಟೋರೆಂಟ್, ಚಲನಚಿತ್ರ ಮಂದಿರ ಸೇರಿದಂತೆ ಅಗತ್ಯ ಸೇವೆಯಲ್ಲದ ಯಾವುದೇ ವಾಣಿಜ್ಯ ಚಟುವಟಿಕೆಗೂ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!