February 2, 2026

ಡಿ.ಕೆ.ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

0
image_editor_output_image1480485788-1765533009831.jpg

ಬೆಳಗಾವಿ: ನನ್ನನ್ನ ಪಕ್ಷದಿಂದ ಉಚ್ಛಾಟನೆ ಮಾಡಿದಾಗ ಡಿಕೆ ಶಿವಕುಮಾರ್‌ ಅವರನ್ನ ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿತ್ತು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ನನ್ನನ್ನ ಉಚ್ಛಾಟನೆ ಮಾಡಿದ ಸಂದರ್ಭದಲ್ಲಿ ದೆಹಲಿಯಲ್ಲಿ ಡಿಕೆ ಶಿವಕುಮಾರ್‌ ಅವರನ್ನ ಆಪರೇಷನ್ ಮಾಡುವ ಪ್ರಯತ್ನ ನಡೆದಿತ್ತು. ನಾನು ಪಕ್ಷದಲ್ಲಿದ್ರೆ ಇದು ಆಗಲ್ಲ ಅಂತ ಉಚ್ಚಾಟನೆ ಬಳಿಕ ಪ್ರಯತ್ನ ನಡೆದಿತ್ತು ಎಂದು ಸ್ಫೋಟಕ ಹೇಳಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!