December 15, 2025

ಮೈಸೂರಿನಲ್ಲಿ ರಸ್ತೆ ಅಪಘಾತ: ಸುಳ್ಯದ ಯುವಕ ಮೃತ್ಯು

0
image_editor_output_image-530632764-1765613504279.jpg

ಸುಳ್ಯ: ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ವಾರ್ ನಿವಾಸಿ ಶೇಷಪ್ಪನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟವರು.

ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸಕ್ಕಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ವಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Share

Leave a Reply

Your email address will not be published. Required fields are marked *

error: Content is protected !!