ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರಿಗೆ 95 ವರ್ಷ ವಯಸ್ಸಾಗಿತ್ತು.
ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ರಾಜ್ಯದ ವಿವಿಧ ಸರ್ಕಾರಗಳಲ್ಲಿ ಪ್ರಮುಖ ಖಾತೆಗಳನ್ನು ನಿಭಾಯಿಸುವ ಮೂಲಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ತೋಟಗಾರಿಕೆ ಸಚಿವರಾಗಿದ್ದು, ಅವರ ಸೊಸೆ ಪ್ರಭಾ ಮಲ್ಲಿಕಾರ್ಜುನ ಸಂಸದರಾಗಿದ್ದಾರೆ.





