December 15, 2025

ಬಂಟ್ವಾಳ: ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರೋಪಿ ಭೋಜ ಮೂಲ್ಯ ಎಂಬಾತನ ಮನೆ ಮತ್ತು ಕೊಟ್ಟಿಗೆ ಜಪ್ತಿ ಮಾಡಿದ ಪೊಲೀಸರು

0
IMG-20251214-WA0001.jpg

ಬಂಟ್ವಾಳ: ದಿನಾಂಕ 13-12-2025 ರಂದು ಸಂಜೆ, ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ, KA-70-8686 ನೇ ನೊಂದಣಿಯ ಸದ್ರಿ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ.

ವಾಹನದ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ, ಅತನು ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿಸಿದ್ದು, ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.

ಮುಂದಿನ ಕಾನೂನುಕ್ರಮಕ್ಕಾಗಿ ಸದ್ರಿ ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ85/2025, ಕಲಂ: ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮುಂದುವರಿದಂತೆ, ಆರೋಪಿತ ಭೋಜ ಮೂಲ್ಯ ರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿರುತ್ತದೆ.

Leave a Reply

Your email address will not be published. Required fields are marked *

You may have missed

error: Content is protected !!