ಮಡಿಕೇರಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್
ಮಡಿಕೇರಿ: ಕೇರಳ ರಾಜ್ಯಕ್ಕೆ ಸೇರಿದ್ದ ಖಾಸಗಿ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕೊಡಗಿನ ಮಾಕುಟ್ಟ ಹೆದ್ದಾರಿ ವ್ಯಾಪ್ತಿಯಲ್ಲಿ ನಡೆದಿದೆ.
ಮಾಕುಟ್ಟದ ಆಂಜನೇಯ ದೇವಾಲಯದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಆದರೆ ಅಷ್ಟೊತ್ತಿಗಾಗಲೇ ಬಸ್ ಸಂಪೂರ್ಣ ಅಗ್ನಿಗೆ ಆಹುತಿಯಾಗಿತ್ತು. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.





