March 3, 2026

ಕೋಟ: ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

0
image_editor_output_image1043844747-1765801423132.jpg

ಕೋಟ: ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಸಾವಿನೊಂದಿಗೆ ಅಂತ್ಯವಾದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿ ರವಿವಾರ ರಾತ್ರಿ ನಡೆದಿದೆ.

ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.

ಸ್ನೇಹಿತರು ಹಾಗೂ ಪರಸ್ಪರ ಸಂಬಂಧಿಗಳಾದ ಇವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದು ಆಗ ಸಂತೋಷ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾ‌ರ್ ಟಿ ಹಾಗೂ ಠಾಣಾ ಎಸ್ಸೆ ಮಾಂತೇಶ್ ಜಾಭಗೌಡ ಮತ್ತು ಹೆಡ್ ಕಾನ್ಸೆಬಲ್ ಪ್ರದೀಪ್, ಮತ್ತು ಅಶೋಕ್ ರವರು ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!