ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ
ಮಂಗಳೂರು: ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚಿಂಚು ತಪಾಸಣೆ ಮಾಡಿದ್ದಾರೆ.
ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್ ರವಾನಿಸಲಾಗಿದೆ. ಸದ್ಯ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ಮಾಡಲಾಗಿದೆ. ಆರ್ ಟಿಓ ಕಚೇರಿಯ ಅಧಿಕೃತ ಮೇಲ್ ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಅದರಲ್ಲಿ 5 ಕಡೆ ಬಾಂಬ್ ಇಡೋದಾಗಿ ತಿಳಿಸಲಾಗಿದೆ. ಇಂದು ಮಧ್ಯನದ ವೇಳೆ ಅಧಿಕಾರಿಯೊಬ್ಬರು ಮೇಲ್ ನೋಡಿ ಪೊಲೀಸ್ ಇಲಾಖೆ ಗೆ ಮಾಹಿತಿ ನೀಡಿದ್ದಾರೆ.
ಶೋಧದ ವೇಳೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.





