ವಿಟ್ಲ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ತಾಲೂಕು ಮಟ್ಟದ ದಫ್ ಸ್ಪರ್ಧೆ
ವಿಟ್ಲ; ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ
ವತಿಯಿಂದ ತಾಲೂಕು ಮಟ್ಟದ ದಫ್ ಸ್ಪರ್ಧೆ ವಿಟ್ಲ ಸಮೀಪದ ಒಕ್ಕೆತ್ತೂರು ನೂರುಲ್ ಹುದಾ ಸಮುದಾಯ ಭವನದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ದಫ್ ಎಸೋಷಿಯೇಷನ್ ಅಧ್ಯಕ್ಷ ಲತೀಫ್ ನೇರಳಕಟ್ಟೆ ಅವರು ವಹಿಸಿದ್ದರು.
ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಮಹಮ್ಮದ್ ರಫೀಕ್ ಅಹ್ಸನಿ ದುವಾದ ಮೂಲಕ ಚಾಲನೆ ನೀಡಿದರು.
ಹಿರಿಯ ದಫ್ ತರಭೇತಿದಾರ ಬಿ.ಎಂ.ಹಸೈನಾರ್ ಕಡಂಬು ಉದ್ಘಾಟಿಸಿದರು.
ಈ ಸಂದರ್ಭ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಭೇಟಿ ನೀಡಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.
ಒಕ್ಕೆತ್ತೂರು ಮಸೀದಿ ಅಧ್ಯಕ್ಷ ವಿ.ಎಂ.ಅಶ್ರಫ್,ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಹಸೈನಾರ್ ಹಾಜಿ ಪೈಲ್ವಾನ್,ವಿ.ಎಸ್,ಇಬ್ರಾಹಿಂ, ಒಕ್ಕೆತ್ತೂರು ಸರಕಾರಿ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿ.ಎಚ್.ಹಾರಿಸ್ ,ಸಾಮಾಜಿಕ ಮುಂದಾಳು ಕೆರೀಮ್ ಕುದ್ದುಪದವು ,ಅಕಾಡಮಿ ಸಿಬಂಧಿ ವಿಜಯ್ ವೇದಿಕೆಯಲ್ಲಿದ್ದರು.
ಸ್ಪರ್ಧೆಯಲ್ಲಿ ರಿಫಾಯಿಯ್ಯ ದಫ್ ಸಂಘ ಕಡಂಬು ತಂಡ ಪ್ರಥಮ ಹಾಗೂ ಒಕ್ಕೆತ್ತೂರು ದಫ್ ಸಂಘ ದ್ವಿತೀಯ ಸ್ಥಾನ ಗಳಿಸಿತು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ,ಕಾರ್ಯಕ್ರಮದ ಸಂಚಾಲಕ ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.





