ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಐವರ ವಿರುದ್ಧ ಪೊಲೀಸ್ ದೂರು ನೀಡಿದ ಚಿನ್ನಯ್ಯ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನಾಗಿ ಬಂದು ಜೈಲು ಸೇರಿ ಜೈಲಿನಂದ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದ ಚಿನ್ನಯ್ಯ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಐವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಬುರುಡೆ ಚಿನ್ನಯ್ಯ, ತನಗೆ ಮತ್ತು ತನ್ನ ಪತ್ನಿಗೆ ಜೀವ ಬೆದರಿಕೆ ಇದ್ದು, ಮಹೇಶ್ ಶೆಟ್ಟಿ ತಿಮರೋಡಿ,ಗಿರೀಶ್ ಮಟ್ಟಣ್ಣವರ್,ವಿಠಲ ಗೌಡ,ಜಯಂತ್, ಸಮೀರ್ ಎಂ.ಡಿ ಮೇಲೆ ದೂರು ನೀಡಿದ್ದಾನೆ.
ಇವರೆಲ್ಲರಿಂದ ಮುಂದೆ ಜೀವ ಬೆದರಿಕೆ ಬರಬಹುದು, ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ. ಮನವಿಯನ್ನು ಸ್ವೀಕರಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲು ಮಾಡಿದ್ದಾರೆ.





