ಬಾಲಿವುಡ್ ನಟಿ ನೋರಾ ಫತೇಹಿ ಸಂಚರಿಸುತ್ತದ್ದ ಕಾರು ಅಪಘಾತ
ಮುಂಬೈ: ಖ್ಯಾತ ನಟಿ ನೋರಾ ಫತೇಹಿ ರಸ್ತೆ ಅಪಘಾತದಲ್ಲಿ ಪಾರಾಗಿದ್ದಾರೆ. ಶನಿವಾರ ಕುಡಿದ ಮತ್ತಿನಲ್ಲಿದ್ದ ಕಾರು ಚಾಲಕನೊಬ್ಬ ನೋರಾ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತತ್ ಕ್ಷಣ ನಟಿಯನ್ನು ಹತ್ತಿರದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಆದರೆ ಯಾವುದೇ ದೊಡ್ಡ ಗಾಯಗಳಿಲ್ಲದೆ ಪಾರಾಗಿದ್ದಾರೆ.
ನೋರಾ ಅವರ ಸ್ಥಿತಿ ಸ್ಥಿರವಾಗಿದೆ ಎಂದು ದೃಢಪಡಿಸಲಾಗಿತ್ತು. ಈ ಮಧ್ಯೆ, ಮುಂಬೈ ಪೊಲೀಸರು ಕುಡಿದ ಮತ್ತಿನಲ್ಲಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಶನಿವಾರ ಮಧ್ಯಾಹ್ನ ಘಟನೆ ನಡೆದ ಕೆಲವೇ ಗಂಟೆಗಳ ನಂತರ ನೋರಾ ಫತೇಹಿ ಮುಂಬೈನಲ್ಲಿ ಡಿಜೆ ಡೇವಿಡ್ ಗುಟ್ಟಾ ಅವರೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು.
ಇನ್‌ಸ್ಟಾಗ್ರಾಮ್ ಸ್ಟೋರೀಸ್ ನಲ್ಲಿ ನೋರಾ ಘಟನೆ ಬಗ್ಗೆ ಹೇಳಿಕೊಂಡಿದ್ದು,’ಇದು ತನ್ನ ಜೀವನದ ಅತ್ಯಂತ ಭಯಾನಕ ಮತ್ತು ಆಘಾತಕಾರಿ ಕ್ಷಣಗಳಲ್ಲಿ ಒಂದಾಗಿದೆ’ ಎಂದಿದ್ದಾರೆ.
‘ಅಪಘಾತದಲ್ಲಿ ತನ್ನ ತಲೆ ಕಾರಿನ ಕಿಟಕಿಗೆ ಡಿಕ್ಕಿ ಹೊಡೆದಿದ್ದು ಈಗ ನೋವು ಅನುಭವಿಸುತ್ತಿದ್ದೇನೆ ಎಂದು ಬಹಿರಂಗಪಡಿಸಿದ್ದಾರೆ ಜೀವಂತವಾಗಿರುವುದಕ್ಕೆ ಕೃತಜ್ಞಳಾಗಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ.





