December 21, 2025

ಮಠಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಆರೋಪಿ ಸ್ವಾಮೀಜಿಗೆ 35 ವರ್ಷ ಕಠಿಣ ಜೈಲು ಶಿಕ್ಷೆ

0
image_editor_output_image-1542044855-1766306081156.jpg

ಚಿಕ್ಕೋಡಿ: ಮಠಕ್ಕೆ ಬಂದ ಭಕ್ತಿಯನ್ನು ಸ್ವಾಮೀಜಿಯೋರ್ವ ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಆರೋಪಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ 13 ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ಕಾರಿನಲ್ಲಿ ಕರೆದೊಯ್ದಿದ್ದ. ನಂತರ ರಾಯಚೂರು, ಬಾಗಲಕೋಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಸುತ್ತಾಡಿಸಿ ಅತ್ಯಾಚಾರ ಎಸಗಿ ಕೊನೆಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಬಸ್‌ ನಿಲ್ದಾಣದಲ್ಲಿ ಬಿಟ್ಟು ಪರಾರಿಯಾಗಿದ್ದ.

ಈ ಕುರಿತು ಅಪ್ರಾಪ್ತ ಬಾಲಕಿ ಕುಟುಂಬದವರು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ತದನಂತರ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಿ ಮೇ 24 ರಂದು ಅತ್ಯಾಚಾರ ಆರೋಪಿ ಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!