ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಥಳಿಸಿ ಕೊಂದ ಪತಿ
ಹೈದರಾಬಾದ್: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ವರದಕ್ಷಿಣೆಗಾಗಿ ಪತಿಯೇ ಥಳಿಸಿ ಕೊಂದ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ಅನುಷಾ (22) ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿಯನ್ನು ಮರಮೇಶ್ ಕುಮಾರ್ ಎಂದು ಗುರುತಿಸಲಾಗಿದೆ.
ಎಂಟು ತಿಂಗಳ ಹಿಂದಷ್ಟೆ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಅನುಷಾ ಮೇಲೆ ಪರಮೇಶ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.





