December 21, 2025

ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ, ಆತಂಕ ಬೇಡ: ಎಫ್‌ಎಸ್‌ಎಸ್‌ಎಐ ಸ್ಪಷ್ಟನೆ

0
image_editor_output_image1779212709-1766307696838.jpg

ನವದೆಹಲಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇದೆ ಎಂಬ ವದಂತಿ ಬೆನ್ನಲ್ಲೇ ಯಾವುದೇ ‘ಆತಂಕದ ಅಗತ್ಯವಿಲ್ಲ’ ಎಂದು ಭಾರತೀಯ ಆಹಾರಸುರಕ್ಷತೆ ಮತ್ತು ಗುಣಮಟ್ಟಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಸ್ಪಷ್ಟನೆ ನೀಡಿದೆ.

‘ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ನೈಟ್ರೋಪ್ಯೂರಾನ್ ಅಂಶ ಪತ್ತೆಯಾಗಿರುವುದಾಗಿ ಯೂಟ್ಯೂಬ್ ಚಾನಲ್‌ನಲ್ಲಿ ಒಂದರಲ್ಲಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಹಲವು ವಿಧದ ಮೊಟ್ಟೆಗಳ ಪರೀಕ್ಷೆ ನಡೆಸಿರುವ ಎಫ್‌ಎಸ್‌ಎಸ್‌ಎಐ, ಇದು ಜನರ ದಾರಿತಪ್ಪಿಸುವ ವರದಿಯಾಗಿದೆ. ಆ ಆರೋಪಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯವಿಲ್ಲ’ ಎಂದು ಎಫ್‌ಎಸ್‌ಎಸ್‌ಎಐ ತಿಳಿಸಿದೆ.

2011ರ ಆಹಾರ ಸುರಕ್ಷತೆ ನಿಯಮದಡಿಯಲ್ಲಿ ಕೋಳಿ ಸಾಕಣೆಯಲ್ಲಿ ನೈಟ್ರೋಪ್ಯೂರಾನ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರತಿ ಕೆ.ಜಿ.ಯಲ್ಲಿ 1.0 – ಮೈಕ್ರೋಗ್ರಾಂನಷ್ಟಿದ್ದರೆ ಯಾವುದೇ ಅಪಾಯವಿಲ್ಲ ಎಂದು ಎಫ್‌ಎಸ್‌ಎಸ್‌ಎಐ ಹೇಳಿದೆ.

ಸಾಮಾಜಿಕ ಜಾಲತಾಣದಲ್ಲಿ ನಿರ್ದಿಷ್ಟ ಬ್ರ‍್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ಅಂಶ ಇದೆ ಎಂಬ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಖಾಸಗಿ ಲ್ಯಾಬ್‌ಗಳಲ್ಲಿ ಮೊಟ್ಟೆ ಪರೀಕ್ಷಿಸಲು ಆದೇಶ ಹೊರಡಿಸಿತ್ತು.

Leave a Reply

Your email address will not be published. Required fields are marked *

error: Content is protected !!