December 22, 2025

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಟೂರ್ ಬಸ್ ಪಲ್ಟಿ

0
image_editor_output_image-1412724697-1766384545094.jpg

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ಸೊಂದು ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ಕಳಸ ತಾಲೂಕಿನ ಕಲ್ಮಕ್ಕಿ-ಕಂಚಿಗಾನೆ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸಕ್ಕೆಂದು ತೆರಳುತ್ತಿದ್ದ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಅಪಘಾತದ ತೀವ್ರತೆಗೆ ಇಬ್ಬರು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಹಲವು ಪ್ರವಾಸಿಗರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave a Reply

Your email address will not be published. Required fields are marked *

error: Content is protected !!