ಸುಳ್ಯ: ಮಾರುತಿ ಓಮ್ನಿ ಕಾರಿಗೆ ಗುದ್ದಿದ ಲಾರಿ: ಲಾರಿ ಚಾಲಕ ಗಂಭೀರ
ಸುಳ್ಯ: ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಡಿಸೆಂಬರ್ 21 ರಂದು ನಡೆದಿದೆ.
ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೂನಡ್ಕ ಬಳಿ, ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ನಂತರ ಲಾರಿ ಪಲ್ಟಿಯಾಗಿದೆ.
ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ ಪಾರಾಗಿದ್ದಾರೆ.





