March 5, 2026

ಹಾಸ್ಟೆಲ್ ಕೊಠಡಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image1722291946-1766470766172.jpg

ಛತ್ತೀಸ್‌ಗಢ: ಪರೀಕ್ಷೆ ಒತ್ತಡ ಮತ್ತು ಶೈಕ್ಷಣಿಕ ಹಿನ್ನಡೆಯಿಂದ ಮನನೊಂದು 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಛತ್ತೀಸ್‌ಗಢದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.

ಜಾರ್ಖಂಡ್‌ನ ಜಮ್‌ಶೆಡ್‌ಪುರ ಮೂಲದ ಪ್ರಿನ್ಸಿ ಕುಮಾರಿ ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಪ್ರಿನ್ಸಿ ಕುಮಾರಿ ಇಲ್ಲಿನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದು, ಡಿ.20ರ ಶನಿವಾರ ರಾತ್ರಿ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪೋಷಕರು ಕರೆ ಮಾಡಿದಾಗ ಘಟನೆ ಬೆಳಕಿಗೆ: ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಪ್ರಿನ್ಸಿ ಪೋಷಕರು ಹಲವು ಬಾರಿ ಕರೆ ಮಾಡಿದ್ದಾರೆ ಆದರೆ ಆಕೆ ಫೋನ್ ಕರೆ ಸ್ವೀಕರಿಸದಿದ್ದಾಗ ಆತಂಕಗೊಂಡ ಪೋಷಕರು ಹಾಸ್ಟೆಲ್‌ ವಾರ್ಡನ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆ ಬಳಿಕ ವಾರ್ಡನ್ ಆಕೆಯ ಕೊಠಡಿ ಬಳಿಕ ಬಂದು ನೋಡಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಇಲ್ಲದಿದ್ದಾಗ ಕಿಟಕಿಯ ಮೂಲಕ ಇಣುಕಿ ನೋಡಿದ್ದು, ಈ ವೇಳೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿ ಘಟನೆ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!