ಕಂಬಳಬೆಟ್ಟು: ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ: ವಿಟ್ಲ ಎಸೈ ರಾಮಕೃಷ್ಣ ಅವರಿಂದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ವಿಟ್ಲ: ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಪ್ರಜಾವಾಣಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಶಾಲೆಯ ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಸ್ವಾಗತ ಭಾಷಣ ಮಾಡಿದರು. ಅಧ್ಯಕ್ಷೀಯ ಭಾಷಣವನ್ನು ಲಿಬಿನ್ ಝೇವಿಯರ್ ನೆರವೇರಿಸಿದರು. ಪ್ರಜಾವಾಣಿ ಪತ್ರಿಕೆಯ ವರದಿಗಾರ ಅಲಿರವರು ಪ್ರಸ್ತಾವಿಕವಾಗಿ ಮಾತನಾಡಿದರು.
ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು 8ನೇ ತರಗತಿಯ ಆಯಿಷಾ ಮರಿಯಂ ಹಾಗೂ 9ನೇ ತರಗತಿಯ ಆಸಿಯಾ ಅರ್ಫಾ ನಿರೂಪಿಸಿದರು. 7 ನೇ ತರಗತಿಯ ಫಾತಿಮಾ ಖದೀರಾ ವಂದನಾರ್ಪಣೆ ಸಲ್ಲಿಸಿದರು.




