March 6, 2026

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಒಂದೇ ಕುಟುಂಬದ ಮೂವರು ಮೃತ್ಯು

0
image_editor_output_image-74622121-1766559447995.jpg

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ – ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.

ನಿಟ್ಟೂರು ಗ್ರಾಮದ ಒಂದೇ ಕುಟುಂಬದ 5 ಜನರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ 3 ಜನ ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!