March 18, 2026

ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ಹೊತ್ತಿ ಉರಿದ ಖಾಸಗಿ ಬಸ್, ಕನಿಷ್ಠ 17 ಮಂದಿ ಸಜೀವ ದಹನ

0
n6944174391766632615498dc818d1bcbac66fa741e0b41b8c56b91becc152fce3307466ac03d0bf07e6617.jpg

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಬಸ್ ನಲ್ಲಿದ್ದ 17 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಬಸ್ ಅತಿವೇಗದಿಂದ ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡದ ರಭಸಕ್ಕೆ ನೋಡ ನೋಡುತ್ತಿದ್ದಂತೆ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕನ್ನಾಲಿಗೆಗೆ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ ಎನ್ನಲಾಗಿದೆ.

ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!