January 31, 2026

ಗಾಂಜಾ ಮಾರಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

0
image_editor_output_image1229964916-1766912551889.jpg

ಸಕಲೇಶಪುರ: ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 269 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕೇರಳದ ನಿವಾಸಿ, ಜೋಯಲ್ ಬಿನ್‌ ಥಾಮಸ್‌ ಮ್ಯಾಥ್ಯೂ ಮತ್ತು ಸಫಾನ್‌ ಬಿನ್‌ ಅಬ್ದುಲ್‌ ಸತ್ತಾರ್‌ ಬಂಧಿತ ಆರೋಪಿಗಳು. ಆರೋಪಿಗಳು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ತಿಳಿದು ಬಂದಿದೆ.

ಡಿ.26 ರಂದು ಹೊಸ ಬಸ್‌ ನಿಲ್ದಾಣದ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಶಸ್ವಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ವನರಾಜು, ಸಬ್‌ ಇನ್ಸ್‌ಪೆಕ್ಟರ್‌ ಮಹೇಶ್‌ ಹಾಗೂ ಸಿಬ್ಬಂದಿ ಪೃಥ್ವಿ, ರೇವಣ್ಣ, ಶ್ರೀಧರ್‌, ಸೋಮಶೇಖರ್‌, ಚಂದ್ರಕಾಂತ್‌ ಮತ್ತು ಮಧು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!