BJP ಶಾಸಕ ಶರಣು ಸಲಗರ್ ವಿರುದ್ಧ FIR ದಾಖಲು
ಬೀದರ್: 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬವರು ದೂರು ನೀಡಿದ್ದಾರೆ. 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್ ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ. ಸಾಲ ಪಡೆದಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.




