ದ.ಕ ಜಿಲ್ಲೆಯಲ್ಲಿ ರಾತ್ರಿ ನಡೆಯುವ ಎಲ್ಲಾ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಯೊಳಗಡೆ ಮುಗಿಸುವಂತೆ ಜಿಲ್ಲಾಧಿಕಾರಿ ಆದೇಶ
ಮಂಗಳೂರು: ನೈಟ್ ಕರ್ಫ್ಯೂಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕಂಬಳ, ಯಕ್ಷಗಾನ ಸೇರಿದಂತೆ ರಾತ್ರಿ ನಡೆಯುವ ಎಲ್ಲ ಕಾರ್ಯಕ್ರಮಗಳನ್ನು ರಾತ್ರಿ 10 ಗಂಟೆಯೊಳಗೆ ನಿಲ್ಲಿಸಬೇಕು. ಈ ನಿಯಮದಲ್ಲಿ ಯಾವುದೇ ಸಡಿಲಿಕೆ ಇಲ್ಲ” ಎಂದಿದ್ದಾರೆ.
ಇನ್ನು ಓಮಿಕ್ರಾನ್ ವೇಗವಾಗಿ ಹರಡುತ್ತಿರುವ ಕಾರಣ, ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಯಾವುದೇ ಸಂದರ್ಭಗಳಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಸಡಿಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.




