ಉಡುಪಿ: ಭೂಗತಪಾತಕಿ ಕಲಿ ಯೋಗೀಶ್ ವಿರುದ್ಧ ಕೋಕಾ ಪ್ರಕರಣ ದಾಖಲು
ಉಡುಪಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತಪಾತಕಿ ಕಲಿ ಯೋಗೀಶ್ ವಿರುದ್ಧ ಕಾಪು ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಿ ಯೋಗೀಶ್ ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. 2022 ಡಿಸೆಂಬರ್‌ನಲ್ಲಿ ಶರತ್ ಶೆಟ್ಟಿ ಕೊಲೆ ನಡೆದಿತ್ತು. ಜಾಗದ ತಕರಾರು ವಿಚಾರದಲ್ಲಿ ಈ ಹತ್ಯೆ ನಡೆದಿತ್ತು. ಯೋಗೀಶ್ ಆಚಾರ್ಯ ಕೊಲೆ ಪ್ರಕರಣದ ಮತ್ತೋರ್ವ ಆರೋಪಿಯಾಗಿದ್ದಾನೆ.
ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA), ಇದು ಸಂಘಟಿತ ಅಪರಾಧಗಳು, ಮಾಫಿಯಾ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ತಡೆಯಲು ಜಾರಿಗೆ ತಂದ ಕಠಿಣ ಕಾನೂನಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ, ಜಾಮೀನು ರಹಿತ ಬಂಧನ ಮತ್ತು ಆಸ್ತಿ ಮುಟ್ಟುಗೋಲಿಗೆ ಅವಕಾಶ ನೀಡುತ್ತದೆ.




