January 31, 2026

ಮಂಗಳೂರು: ನಿಟ್ಟೆ ಡೀಮ್ಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

0
image_editor_output_image-1972232702-1767242884557.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಸ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಇಂದು(ಜ.1) ಬೆಳಗ್ಗೆ ನಿಧನರಾಗಿದ್ದಾರೆ.

ಶಿಕ್ಷಣ ತಜ್ಞ, ಉದ್ಯಮಿ, ಸಮಾಜ ಸೇವಕರಾಗಿದ್ದ ವಿನಯ ಹೆಗ್ಡೆ ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ ಗೌರವ ಡಾಕ್ಟರೇಟ್ ಸಹಿತ ಹಲವು ಗೌರವಗಳಿಗೆ ಪಾತ್ರರಾಗಿದ್ದರು.

ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ವಿನಯ ಹೆಗ್ಡೆ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿದವರು. ತಂದೆಯ ಆಶಯದಂತೆ 1979ರಲ್ಲಿ ‘ನಿಟ್ಟೆ ಎಜುಕೇಶನ್‌ ಟ್ರಸ್ಟ್’ ಸ್ಥಾಪಿಸಿದರು.

Leave a Reply

Your email address will not be published. Required fields are marked *

error: Content is protected !!