ಮೂಡುಬಿದಿರೆ: ರಸ್ತೆ ಬದಿಯಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿ: ಬಾಲಕ ಸ್ಥಳದಲ್ಲೇ ಸಾವು
ಮೂಡುಬಿದಿರೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಢಿಕ್ಕಿಯಾದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಮಾರೂರು ಹೊಸಂಗಡಿ ಎಂಬಲ್ಲಿ ಬುಧವಾರ ಸಂಭವಿಸಿದೆ.
ಹೊಸಂಗಡಿ ನಿವಾಸಿ, ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ. ಈತ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಧ್ಯಾಹ್ನ ಝಾಹಿರ್ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಬಾಲಕನಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಬಾಲಕ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.




