ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
ಬೆಳ್ತಂಗಡಿ: ನೆರಿಯಾದಲ್ಲಿ ಡಿ. 25ರಂದು ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಬುಧವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನೆರಿಯಾ ಗ್ರಾಮದ ಗಂಡಿಬಾಗಿಲು ನಿವಾಸಿ ಜಾನ್ ಪಿ.ಜೆ.(52) ಮೃತಪಟ್ಟ ದುರ್ದೈವಿ. ಅವರು ಡಿ. 25ರಂದು ಸಂಜೆ 4.20ರ ಸುಮಾರಿಗೆ ಅಂಬಟ್ಟಮಲೆ ಭಾಗದಿಂದ ಅಣಿಯೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಇಳಿಜಾರು ರಸ್ತೆಯಲ್ಲಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದಿದ್ದರು. ಈ ವೇಳೆ ಅವರ ತಲೆ ಹಾಗೂ ಕಿವಿ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿತ್ತು.
ತತ್ ಕ್ಷಣ ಅವರನ್ನು ಕಕ್ಕಿಂಜೆ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬುಧವಾರ(ಅ.31)ಮೃತಪಟ್ಟಿದ್ದಾರೆ. ಘಟನೆಯ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




