ವಿಟ್ಲ: ರಸ್ತೆ ಸುರಕ್ಷತಾ ನಿಯಮ ಪಾಲಿಸಲು ಪೊಲೀಸರಿಂದ ಮನವಿ: ವಿಟ್ಲ ಪೇಟೆಯಲ್ಲಿ ಹಿಂಬದಿ ಸವಾರರಿಗೆ ಹೆಲ್ಮಟ್ ಕಡ್ಡಾಯ
ವಿಟ್ಲ: ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಪ್ರಯುಕ್ತ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ವಿಟ್ಲ ಪೊಲೀಸರು ಮನವಿ ಮಾಡಿದ್ದಾರೆ.
ವಿಟ್ಲ ಪೇಟೆಯಲ್ಲಿ ಕಾರ್ಯಾಚರಣೆ ಇಳಿದಿರುವ ವಿಟ್ಲ ಪೊಲೀಸರು ಹೆಲ್ಮಟ್ ಧರಿಸದೇ ಸಂಚರಿಸುತ್ತಿದ್ದ ಹಿಂಬದಿ ಸವಾರರಿಗೆ ದಂಡ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.




