January 31, 2026

ಮಂಗಳೂರು ಪೊಲೀಸರ ಕಾರ್ಯಾಚರಣೆ: 21 ಕೆ.ಜಿ ತೂಕದ ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

0
image_editor_output_image-1542176544-1767531099923.jpg

ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಚೊಕ್ಕಬೆಟ್ಟು ಗ್ರಾಮದ ಪರಮೇಶ್ವರಿ ನಗರದ, 2ನೇ ಕ್ರಾಸ್ ನ ಬೆನಕ ಎಂಬ ಹೆಸರಿನ ಮನೆಯ ಬಳಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಗಳಾದ ಪ್ರದೀಪ್ ಪೂಜಾರಿ, ಶಾಲೆಮಜಲು, ಉಳಾಯಿಬೆಟ್ಟು ಗ್ರಾಮ, ಗುರುಪುರ. ಇದೀಗ ವಾಸ ಚೊಕ್ಕಬೆಟ್ಟು, ಸುರತ್ಕಲ್ ಹಾಗೂ ವಸಂತ ಪೂಜಾರಿ ಚಿತ್ರಾಪುರ, ಮಂಗಳೂರು ಎಂಬವರನ್ನು ದಸ್ತಗಿರಿ ಮಾಡಿ, ಅವರ ವಶದಲ್ಲಿದ್ದ ಸುಮಾರು 21 ಕೆ.ಜಿ 450 ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ. 10,72,500) ಮತ್ತು ಮೂರು ಮೊಬೈಲ್ ಪೋನ್, ಗಾಂಜಾ ಸಾಗಿಸಲು ಬಳಸಿದ KA-04 MD-2532 ನಂಬ್ರದ ಸ್ವೀಫ್ಟ್ ಕಾರು, ಗಾಂಜಾ ಸಂಗ್ರಹಿಸಿದ್ದ ಮೂರು ಲಗೇಜ್ ಬ್ಯಾಗ್, ಗಾಂಜಾ ಸೇವಿಸಲು ಬಳಸುವ ಸ್ಟ್ರೀಫ್ಸ್, ಹಾಗೂ 1,000 ರೂಪಾಯಿ ನಗದನ್ನು ಆರೋಪಿಗಳಿಂದ ಸ್ವಾಧೀನಪಡಿಸಿಕೊಂಡಿರುತ್ತಾರೆ.

ಆರೋಪಿಗಳು ಗಾಂಜಾವನ್ನು ಹೊಸ ವರ್ಷಾಚರಣೆಯ ಸಂಬಂಧ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ದಿನಾಂಕ:29-12-2025 ರಂದು ಓರಿಸ್ಸಾದಿಂದ ತಂದಿರುವುದಾಗಿ ತಿಳಿಸಿದ್ದು, ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಇದ್ದ ಕಾರಣದಿಂದ ಮಾರಾಟ ಮಾಡಲು ಸಾಧ್ಯವಾಗದೇ ಇದ್ದು, ಅದನ್ನು ಕಾರಿನಲ್ಲಿಯೇ ಇಟ್ಟಿರುವುದಾಗಿ ಆರೋಪಿಗಳು ತಿಳಿಸಿರುತ್ತಾರೆ.

ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಕಾರು ಮತ್ತು ಇತರೆ ವಸ್ತುಗಳ ಒಟ್ಟು ಮೌಲ್ಯ 13,86,500 ರೂಗಳಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅ.ಕ್ರ. 01/2026 ಕಲಂ: 8(C), 20(b)(ii),(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.

ಆರೋಪಿ ಪ್ರದೀಪ್ ಪೂಜಾರಿ ವಿರುದ್ದ ಹಲವಾರು ಪ್ರಕರಣಗಳು ದಾಖಲಾಗಿರುತ್ತದೆ. ಬಜಪೆ ಠಾಣೆಯಲ್ಲಿ ಎರಡು ಪ್ರಕರಣ, ಬರ್ಕೆ ಠಾಣೆಯಲ್ಲಿ 1 ಪ್ರಕರಣ, ಬೆಳ್ತಂಗಡಿ ಠಾಣೆಯಲ್ಲಿ 1, ಧರ್ಮಸ್ಥಳದಲ್ಲಿ 1, ಮುಲ್ಕಿ ಮತ್ತು ಸುರತ್ಕಲ್ ಠಾಣೆಯ ತಳ ಒಂದೊಂದು ಪ್ರಕರಣ, ದಕ್ಷಿಣ ಠಾಣೆಯಲ್ಲಿ ಒಂದು, ಒಟ್ಟು ಎಂಟು ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಉತ್ತರ ಉಪ-ವಿಭಾಗದ ಎ.ಸಿ.ಪಿ. ಶ್ರೀಕಾಂತ.ಕೆ. ರವರ ನೇತ್ರತ್ವದ ತಂಡದ ಸಿಬ್ಬಂದಿಗಳಾದ ಎ.ಎಸ್.ಐ ಚಂದ್ರಶೇಖರ್, ಹೆಚ್.ಸಿ ರೆಜಿ.ಎಂ., ದಾಮೋದರ್, ಹಾಲೇಶ್ ನಾಯ್ಕ್, ಸುನೀಲ್ ಪಡನಾಡ, ಸಂಪತ್ ಹಾಗೂ ಸುರತ್ಕಲ್ ಠಾಣಾ ಪಿ.ಐ. ಪ್ರಮೋದ್ ಕುಮಾರ್, ಪಿ.ಎಸ್.ಐ ರಘುನಾಯ್ಕ್ ಮತ್ತು ಸಿಬ್ಬಂದಿಗಳಾದ ಅಣ್ಣಪ್ಪ, ಅಜಿತ್ ಮ್ಯಾಥ್ಯೂ, ಅಂಜಿನಪ್ಪ ರವರು ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!