ಮಂಗಳೂರು: ರೈಲಿನ ಮೂಲಕ ಗಾಂಜಾ ತಂದು ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್
ಮಂಗಳೂರು: ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಿಹಾರ ರಾಜ್ಯದ ನಿವಾಸಿಗಳಾದ ಹಾಲಿ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್, ಬ್ರಿಜೇಶ್ ಶ್ರೀವತ್ಸ ಎಂದು ಗುರುತಿಸಲಾಗಿದೆ.ದಿನಾಂಕ 03-01-2026 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರಿಧಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು NDPS Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುತ್ತಾರೆ.


