ಸುಳ್ಯ: 3 ವರ್ಷದ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಸುಳ್ಯ: ತನ್ನ ಮೂರು ವರ್ಷದ ಮಗುವನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿಯೊಬ್ಬಳು ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಶನಿವಾರ ರಾತ್ರಿ ಮನೆಯವರೊಂದಿಗೆ ಕೆಲಸ ಕಾರ್ಯಗಳನ್ನು ಮಾಡಿ ಮಲಗಿದ್ದ ಮಧುಶ್ರೀ ಅವರು ರವಿವಾರ ಬೆಳಗ್ಗೆ ಮಗು ಸಹಿತ ಕಾಣದೇ ಇದ್ದ ಸಂದರ್ಭದಲ್ಲಿ ಮನೆಯವರು ಎಲ್ಲೆಡೆ ಹುಡುಕಾಡಿದ್ದಾರೆ. ಈ ವೇಳೆ ಮನೆ ಸಮೀಪದ ಕೆರೆಯಲ್ಲಿ ಮಧುಶ್ರೀ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ.




