January 31, 2026

ತ್ರಿಸ್ತರ ಸ್ಥಳೀಯ ಸಂಸ್ಥೆಯ ಚುನಾವಣೆಗೆ ಸಜ್ಜಾಗಲು ಬ್ಲಾಕ್ ಕಾಂಗ್ರೇಸ್ ಜೊತೆ ಪಂಚಾಯತ್ ರಾಜ್ ಸಂಘಟನೆ  ಕೈಜೋಡಿಸಲಿದೆ: ಕುಳಾಲು ಸುಭಾಶ್ಚಂದ್ರ ಶೆಟ್ಟಿ

0
image_editor_output_image-108194142-1767629575188

ಬೆಳ್ತಂಗಡಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹತ್ವದ ಸಭೆ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಬಿ.ಕೆ. ಶಿವರಾಂ ಅವರ ನೇತೃತ್ವದಲ್ಲಿ ಈ ಸಭೆ ಆಯೋಜಿಸಲಾಗಿದ್ದು, ಮುಂದಿನ ಸ್ಥಳೀಯ ಸಂಸ್ಥೆಯ ಚುನಾವಣೆಗಳ ತಯಾರಿಯ ಕುರಿತು ಗಂಭೀರ ಚರ್ಚೆ ನಡೆಯಿತು.

ಸಭೆಯಲ್ಲಿ ಗ್ರಾ.ಪಂಚಾಯತ್ ಅಧ್ಯಕ್ಷರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಪಕ್ಷದ ಸಂಘಟನೆ ಬಲಪಡಿಸುವುದು ಹಾಗೂ ಸ್ಥಳೀಯ ಮಟ್ಟದಲ್ಲಿ ಜನಪರ ಚಟುವಟಿಕೆಗಳನ್ನು ಇನ್ನಷ್ಟು ಚುರುಕುಗೊಳಿಸುವ ಕುರಿತು ಅಭಿಪ್ರಾಯ ವಿನಿಮಯ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸತೀಶ್ ಬಂಗೇರ ಕಾಶಿಪಟ್ನ ವಹಿಸಿದ್ದರು.

ಈ ಸಂದರ್ಭ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು, ಪಂಚಾಯತ್ ರಾಜ್ ಸಂಘಟನೆ ಚುನಾವಣೆ ಸಿದ್ಧತೆಗಾಗಿ ಕಾರ್ಯಕರ್ತರನ್ನು ಸಕ್ರಿಯಗೊಳಿಸಿ, ಪಂಚಾಯತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲು ಕ್ರಮ ಕೈಗೊಂಡಿದ್ದು, ಕಾರ್ಯಕರ್ತರನ್ನು ತಲಮಟ್ಟದಲ್ಲಿ ಒಗ್ಗೂಡಿಸಿ ಬಲಿಷ್ಠಗೊಳಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಅಲ್ಲದೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ‘ಗ್ರಾಮ ಬೇಟಿ’ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವವನ್ನು ಸಭೆಗೆ ವಿವರಿಸಿದರು. ಗ್ರಾಮೀಣ ಜನರ ಸಮಸ್ಯೆಗಳನ್ನು ನೇರವಾಗಿ ಕೇಳಿ ಪರಿಹಾರ ಕಂಡುಕೊಳ್ಳುವ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಬಾಗಿಯಾಗಬೇಕು ಎಂದು ತಿಳಿಸಿದರು.
ಮಾತು ಮುಂದುವರಿಸಿದ ಸುಭಾಶ್ಚಂದ್ರ ಶೆಟ್ಟಿ ಅವರು, ಕೇಂದ್ರ ಬಿಜೆಪಿ ಸರ್ಕಾರ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಕ್ರಮೇಣ ಕುಂಠಿತಗೊಳಿಸುತ್ತಿದ್ದು, 15ನೇ ಹಣಕಾಸು ಆಯೋಗದ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಗ್ರಾಮೀಣ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಇದೇ ರೀತಿ ಮುಂದುವರಿದರೆ, ಈ ಬಗ್ಗೆ ನಾವು ಜನರಿಗೆ ಹೆಚ್ಚಿನ ಮಾಹಿತಿಯನ್ನು ತಿಳಿಸಿ ಬಿಜೆಪಿಯ ವೈಫಲ್ಯವನ್ನು ಪ್ರಚಾರ ಪಡಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಬ್ಲಾಕ್ ಕಾಂಗ್ರೇಸಿನೊಂದಿಗೆ ಸೇರಿಕೊಂಡು ತಾಲೂಕು ಮಟ್ಟದಲ್ಲಿ ಕೇಂದ್ರ ಸರಕಾರದ ವೈಪಲ್ಯಗಳ ವಿರುದ್ಧ ಪ್ರತಿಭಟನೆ ಕೂಡ ಕೈಗೊಳ್ಳಲು ಪಂಚಾಯತ್ ರಾಜ್ ಸಂಘಟನೆ ನಿರ್ದಾರ ಕೈಗೊಂಡಿದೆ ಎಂದು ತಿಳಿಸಿದರು.

ಸಭೆಯಲ್ಲಿ ರಕ್ಚಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಬಂಗೇರ ಕಾಶಿಪಟ್ನ ಅವರು ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಮಹತ್ವದ ಮಾಹಿತಿ ನೀಡಿದರು.

ಬಿಜೆಪಿ ಪಕ್ಷವು ಚುನಾವಣೆ ಗೆಲ್ಲುವ ಉದ್ದೇಶದಿಂದ ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟುಮಾಡುವ ರೀತಿಯ ಷಡ್ಯಂತ್ರ ರೂಪಿಸುತ್ತಿದೆ ಎಂದು ಸಭೆಗೆ ಎಚ್ಚರಿಕೆ ನೀಡಿದರು. ಈ ಹಿನ್ನೆಲೆ ಪಂಚಾಯತ್ ಸದಸ್ಯರು ಹಾಗೂ ಮುಂದಿನ ದಿನಗಳಲ್ಲಿ ಗ್ರಾ.ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾದವರು ತಮ್ಮ ತಮ್ಮ ವ್ಯಾಪ್ತಿಯ ಬಿ.ಎಲ್.ಎ.ಗಳ ಸಹಾಯ ಪಡೆದು ಮತದಾರರ ಪಟ್ಟಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಕರೆ ನೀಡಿದರು. ಯಾವುದೇ ಅಕ್ರಮಗಳು ಅಥವಾ ತಪ್ಪುಗಳಿಂದ ಪಕ್ಷಕ್ಕೆ ಹಾನಿಯಾಗದಂತೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಸಭೆಗೆ ಸಂದೇಶ ನೀಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಖಲಂದರ್ ಶಾಫಿ ಸ್ವಾಗತಿಸಿ ಧನ್ಯವಾದ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಧಾದಿಕಾರಿಗಳು ಜಿಲ್ಲಾ, ತಾಲೂಕು ಮಟ್ಟದ ನಾಯಕರು ಸಭೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!