January 31, 2026

ಕುಂದಾಪುರ: KSRTC ಬಸ್ ಗೆ ಟಿಪ್ಪರ್ ಡಿಕ್ಕಿ: ಕಾಲೇಜು ವಿಧ್ಯಾರ್ಥಿಗಳು ಸಹಿತ ಹಲವರಿಗೆ ಗಾಯ

0
n6958490481767671802770e16e8ac97023cf16c67afdafe52fcb2d571f4511b042833aee117c5def053981.jpg

ಕುಂದಾಪುರ: ಟಿಪ್ಪರ್ ಲಾರಿಯೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವು ಮಂದಿ ಗಾಯಗೊಂಡ ಘಟನೆ ಜ.5ರಂದು ಸಂಜೆ 4.35ರ ಸುಮಾರಿಗೆ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನಲ್ಲಿ ನಡೆದಿದೆ.

ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ಅತೀ ವೇಗ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ಬಸ್ಸಿನ ಬಲ ಬದಿ ಜಖಂಗೊಂಡಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡರು. ಇದರಲ್ಲಿ ಮೂವರ ಸ್ಥಿತಿ ಗಂಭೀರ ವಾಗಿದ್ದು, ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರ ಪೈಕಿ ಏಳು ಮಂದಿ ವಿದ್ಯಾರ್ಥಿಗಳಾಗಿದ್ದಾರೆ. ಟಿಪ್ಪರ್ ಚಾಲಕ ರಾಘವೇಂದ್ರ ತೀವ್ರ ಗಾಯ ಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳ ಪೈಕಿ ಮೂವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ 7 ಮಂದಿ ಚಿಕಿತ್ಸೆ ಪಡೆದಿದ್ದು, ಮೂವರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಕುಂದಾಪುರದ ಆದರ್ಶ ಆಸ್ಪತ್ರೆಯಲ್ಲಿ 7 ಮಂದಿ ಇದ್ದು, ಐವರು ಒಳರೋಗಿಗಳಾಗಿ, ಚಿನ್ಮಯಿ ಆಸ್ಪತ್ರೆಯಲ್ಲಿ ಒಬ್ಬರು ಒಳರೋಗಿಯಾಗಿ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!