January 31, 2026

SIR ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ತಹಸೀಲ್ದಾರ್ ದೂರು ನೀಡಿದ ಎಸ್‌ಡಿಪಿಐ

0
IMG-20260106-WA0006.jpg

ಬೆಳ್ತಂಗಡಿ: ವಿಶೇಷ ತೀವ್ರ ಪರಿಷ್ಕರಣೆ (SIR) ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೆ ಎಸ್‌ಡಿಪಿಐ ನಿಯೋಗ ದೂರು ನೀಡಿತು.

ಚುನಾವಣಾ ಆಯೋಗ ತಂದಂತಹ (SIR) Special Intensive Revision -(ವಿಶೇಷ ತೀವ್ರ ಪರಿಷ್ಕರಣೆ) ವಿಚಾರದಲ್ಲಿ ತಾವುಗಳು ನೇಮಿಸಲ್ಪಟ್ಟ (BLO) ಬೂತ್ ಮಟ್ಟದ ಅಧಿಕಾರಿಗಳ ಮಾಹಿತಿ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ತಾವುಗಳು ಈ ಕೂಡಲೆ ಮಧ್ಯ ಪ್ರವೇಶಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿ ಮನವಿಯಲ್ಲಿ ಉಲ್ಲೇಖಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ನಗರ ಸಮಿತಿ ಅಧ್ಯಕ್ಷರಾದ ರಿಯಾಝ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಶುಕುರ್ ಕುಪ್ಪೆಟ್ಟಿ ಹಾಗೂ ಇಸ್ಮಾಯಿಲ್ ಸಂಜಯನಗರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!