ಮಂಗಳೂರು: ಮೂಡಬಿದಿರೆಯ ಯುವತಿ ನದಿಗೆ ಹಾರಿ ಆತ್ಮಹತ್ಯೆ
ಮಂಗಳೂರು : ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ.
ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ ಬಳಿ ಬಂದು ಏಕಾಏಕಿ ನಿಲ್ಲಿಸಿ ನದಿಗೆ ಹಾರಿದ್ದಾಳೆ. ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು, ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪರಿಶಿಷ್ಟ ಸಮುದಾಯಕ್ಕೆ ಸೇರಿದ ನವ್ಯಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಮದುವೆಯಾಗುವುದಾಗಿ ವಂಚಿಸಿದ್ದಾನೆ ಎಂದು ಹೇಳಲಾಗಿದೆ. ಆತನ ಭೇಟಿಗೂ ಮುಂದಾಗಿ ಕರೆ ಮಾಡಿದ್ದಳು, ಬಳಿಕ ಡೆತ್ ನೋಟ್ ಬರೆದಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ




