ಕಾರವಾರ: ವಿವಾಹಕ್ಕೆ ಒಪ್ಪಿಗೆ ನೀಡದ ಯುವತಿ: ಮನನೊಂದು ಯುವಕ ಆತ್ಮಹತ್ಯೆ
ಕಾರವಾರ: ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಡನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ.
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧವನ್ನ ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.




