ಉಡುಪಿ: ಶಿರೂರು ಮಠದ ಪರ್ಯಾಯ ಮಹೋತ್ಸವದ ಕುರಿತು ಆಕ್ಷೇಪಾರ್ಹ ಪೋಸ್ಟ್: ಆರೋಪಿ ಸುಧಾಕರ್ ಬಂಧನ
ಉಡುಪಿ: ಶಿರೂರು ಮಠದ ಪರ್ಯಾಯ ಮಹೋತ್ಸವದ ಕುರಿತು ಅಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪಿಯೋರ್ವನನ್ನು ಬಂಧಿಸಲಾಗಿದೆ.
ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಆರೋಪ ಪ್ರಕರಣಗಳಿಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು ನಿವಾಸಿ ಸುಧಾಕರ (37) ಬಂಧಿತ ಆರೋಪಿ. ಈತನನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದು ಪ್ರಕರಣದ ಆರೋಪಿ ನಿಟ್ಟೆಯ ಸುದೀಪ್ ಶೆಟ್ಟಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ




