ಮಂಗಳೂರು ಮೂಲದ ಟೆಕ್ಕಿಯೊಬ್ಬ ಅಪಾರ್ಟ್‌ಮೆಂಟ್‌ನ ಹಾರಿ ಆತ್ಮಹತ್ಯೆ
ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿಯೊಬ್ಬ ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಗಲಗುಂಟೆಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಮೃತನನ್ನು ನಿಕ್ಷೇಪ್ ಬಂಗೇರಾ (24) ಎಂದು ಗುರುತಿಸಲಾಗಿದೆ. ಮೂಲತಃ ಮಂಗಳೂರಿನ ನಿವಾಸಿಯಾಗಿರುವ ಬಂಗೇರಾ, ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ತಂದೆ ತಾಯಿ ಜೊತೆ ಬಾಗಲಗುಂಟೆ ಪ್ರಿನ್ಸ್ ಅಪಾರ್ಟ್ಮೆಂಟ್ ವಾಸವಿದ್ದ. ನಿಕ್ಷೇಪ್ ವರ್ಕ್ ಫ್ರಂ ಹೋಮ್ ಕೆಲಸ ಮಾಡುತ್ತಿದ್ದು, ಸ್ಕಿಜೋಫ್ರೇನಿಯಾ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅಪಾರ್ಟ್‌ಮೆಂಟ್‌ನ 16ನೇ ಮಹಡಿಗೆ ಬಂದು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




